ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ ನಡೆದಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ ಮಾನವೀಯತೆಯ ಮಾದರಿಯಾಗಿದೆ.
ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಲರಾಮ ಬಾಗಲಕೋಟೆ (30) ಅವರು ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ದೃಢಪಡಿಸಿದ ನಂತರ, ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದರು.
ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ತಡರಾತ್ರಿ ವೈದ್ಯರು ಅಂಗಾಂಗಗಳನ್ನು ಪಡೆದರು. ಒಂದು ಕಿಡ್ನಿಯನ್ನು ಝಿರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಕಲಬುರಗಿಯ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಮತ್ತೊಂದು ಕಿಡ್ನಿಯನ್ನು ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಯಶಸ್ವಿಯಾಗಿ ಅಳವಡಿಸಲಾಗಿದೆ.
ಇದನ್ನೂ ಓದಿ : ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಗಂಭೀರ ಗಾಯ



















