ತುಮಕೂರು : ಸಿದ್ದಗಂಗಾ ಮಠದ ಮ್ಯಾನೇಜರ್ ಜಗದೀಶ್ (70) ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಠದಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದ ಜಗದೀಶ್, ಬೆಳಗ್ಗೆ ಶಟಲ್ ಕಾಕ್ ಆಡುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದು, ಆದರೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಕಲ್ಪತರು ನಾಡಲ್ಲಿ ದುಃಖದ ವಾತವರಣ ನಿರ್ಮಾಣವಾಗಿದೆ.
ಇದನ್ನೂ ಓದಿ : “ಕಿಂಗ್” ಆಗ್ತಿದಾರೆ ಲೂಸ್ ಮಾದ ಯೋಗಿ..!



















