ಚಾಮರಾಜನಗರ : ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ ಮತ್ತು ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ನಡೆದಿದೆ.
ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರ್ತಿದ್ದ ಸರ್ಕಾರಿ ಬಸ್ ಮುಂದೆಯಿಂದ ಬಂದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮಹದೇಶ್ವರ ಬೆಟ್ಟದ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಫಿಲ್ಮ್ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ



















