ಮಂಗಳೂರು : ನಗರದಲ್ಲಿ ಮಾದಕವಸ್ತು (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28), ಮೊಹಮ್ಮದ್ ಶಿಫಾನ್ (28) ಬಂಧಿತರು.
ಬೆಂಗಳೂರಿಂದ ಮಾದಕವಸ್ತು ತಂದು ಮಂಗಳೂರಿನ ತಲಪಾಡಿಯಲ್ಲಿ ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು, ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಬಂಧಿತರಿಂದ 11,90 ಲಕ್ಷ ರೂಪಾಯಿ ಮೌಲ್ಯದ 118.13 ಗ್ರಾಂ ಮಾದಕವಸ್ತು ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಮಾಹಿತಿ ಇದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸೀದ್ದಾರೆ.
ಇದನ್ನೂ ಓದಿ : ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಭೀಕರ ಅಪಘಾತ | ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ!



















