ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮ ಜೋರಾಗಿದ್ದು, ನಸುಕಿನ ಜಾವ 5 ಗಂಟೆಯಿಂದಲೇ ರುದ್ರಾಭಿಷೇಕದೊಂದಿಗೆ ಶಿವರಾತ್ರಿ ಪೂಜೆ ಆರಂಭವಾಗಿದೆ.

ಕಾಡುಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಅಲಂಕಾರಗಳನ್ನು ಮಾಡಲಾಗಿದ್ದು, ಶಿವನಿಗೆ ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತಿದೆ. ನೂರಾರು ಸಂಖ್ಯೆಯಲ್ಲಿ ದೇವಾಲಯಕ್ಕೆ ಭಕ್ತರು ಹರಿದು ಬರುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಶಿವನ ದರ್ಶನಕ್ಕೆ ಬೇರೆ ಬೇರೆ ಊರುಗಳಿಂದ ಭಕ್ತಾದಿಗಳು ಆಗಮಿಸುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಶಿವನ ದರ್ಶನ ಪಡೆಯುತ್ತಿದ್ದಾರೆ. ಇನ್ನು ಶಿವರಾತ್ರಿ ಹಿನ್ನೆಲೆ ದೇವಸ್ಥಾನವನ್ನು ವಿಶೇಷ ಹೂವುಗಳಿಂದ ಅಲಂಕಾರಿಸಲಾಗಿದೆ. ಭಕ್ತರು ಶಿವಲಿಂಗಗಳಿಗೆ ವಿಶೇಷ ಪೂಜೆ ಮಾಡುತ್ತಿದ್ದು, ಹಾಲು, ಮೊಸರು, ತುಪ್ಪ ಎರೆದು ಶಿವನಿಗೆ ಅಭಿಷೇಕ ನೆರವೇರಿಸುತ್ತಿದ್ದಾರೆ.

ಇದನ್ನೂ ಓದಿ : 22 ಲೋಡ್ ಮೆಕ್ಕೆಜೋಳಕ್ಕೆ ರಾತ್ರೋರಾತ್ರಿ ಬೆಂಕಿ ಹಾಕಿದ ಕಿಡಿಗೇಡಿಗಳು!



















