ಬೆಂಗಳೂರು | ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಇಂದು (ಭಾನುವಾರ) ಬೆಳಗ್ಗೆ 6 ಗಂಟೆ ಸುಮಾರಿಗೆ ಯಲಹಂಕದ ಚೌಡೇಶ್ವರಿ ಲೇಔಟ್‌ನ ಮನೆಯಲ್ಲಿ ಇದ್ದಕ್ಕಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ.

ಘಟನೆ ವೇಳೆ ಮನೆಯಲ್ಲಿದ್ದ ಬಾಗೇಪಲ್ಲಿ ಮೂಲದ ದಂಪತಿಗಳಿಬ್ಬರು ಗಾಯಗೊಂಡಿದ್ದಾರೆ. ಕೃಷ್ಣಮ್ಮ-ರಾಜು ಗಾಯಗೊಂಡ ಪತಿ ಪತ್ನಿ. ಸ್ಫೋಟ ಹೇಗಾಯಿತು ಅನ್ನೋದರ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ. ಆದ್ರೆ ಬೆಳಗ್ಗೆ ಗ್ಯಾಸ್ ಹಚ್ಚುವಾಗ ಅಥವಾ ಲೈಟ್ ಆನ್ ಮಾಡಿದಾಗ ಸ್ಪೋಟ ಸಂಭವಿಸಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಸ್ಪೋಟದ ತೀವ್ರತೆಗೆ ಮನೆಗೋಡೆಯ ಒಂದು ಭಾಗವೇ ಛಿದ್ರವಾಗಿದೆ. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಕೃಷ್ಣಮ್ಮ-ರಾಜು ದಂಪತಿಯನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಇನ್ನೂ ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ | ಸುಬುಧೇಂದ್ರ ತೀರ್ಥ ಶ್ರೀಗಳಿಂದ ಶಿವನಿಗೆ ಮಹಾರುದ್ರಾಭಿಷೇಕ



















