ಬೆಂಗಳೂರು : ಬಿಕ್ಲು ಶಿವ ಕೊಲೆ ಕೇಸ್‌ಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಶಾಸಕ ಬೈರತಿ ಬಸವರಾಜ್‌ರನ್ನು ಸಿಐಡಿ ಅಧಿಕಾರಿಗಳು ಇಂದು ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದಾರೆ. ಬೆಂಗಳೂರು ನಗರದ ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಧೀಶರ ನಿವಾಸದಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಮಡಿವಾಳ ಎಸಿಪಿ ವಾಸುದೇವ್ ನೇತೃತ್ವದಲ್ಲಿ ಕಟ್ಟು ನಿಟ್ಟಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯವು, ಬೈರತಿ ಬಸವರಾಜ್ ಅವರಿಗೆ 7 ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಮುಂದಿನ ಶನಿವಾರದವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಲು ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ.
ನಿನ್ನೆ ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್ ಸಿಕ್ಕಿತ್ತು. ಜಯದೇವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಯ ತಪಾಸಣೆ ನಡೆಸಲು ತನಿಖಾಧಿಕಾರಿಗೆ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ಸೂಚನೆ ನೀಡಿದ್ದು, ಚಿಕಿತ್ಸೆ ಕೊಡಿಸಿದ ಬಳಿಕ ಹಾಜರುಪಡಿಸುವಂತೆ ಸಿಐಡಿಗೆ ಸೂಚಿಸಿದ್ದರು.
ಇದನ್ನೂ ಓದಿ : ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹ*ಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ



















