ಬೆಂಗಳೂರು : ನೀವೇನಾದರೂ ಕೇಂದ್ರ ಸರ್ಕಾರದ ಹುದ್ದೆಯನ್ನು ಹುಡುಕುತ್ತಿದ್ದೀರಾ? ಬೆಂಗಳೂರಿನಲ್ಲಿಯೇ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಸಂಸ್ಥೆಯಲ್ಲಿ ಖಾಲಿ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (IIAP Recruitment 2026) ಹೊರಡಿಸಲಾಗಿದೆ. ಒಂದು ಪ್ರಾಜೆಕ್ಟ್ ಸೈಂಟಿಫಿಕ್ ಅಸಿಸ್ಟಂಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್
ಹುದ್ದೆ ಹೆಸರು: ಪ್ರಾಜೆಕ್ಟ್ ಸೈಂಟಿಫಿಕ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 01
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಮಾರ್ಚ್ 2
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ, ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ iiap.res.in ಗೆ ಭೇಟಿ ನೀಡಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ನಮೂದಿಸಿದ ದಾಖಲೆಗಳೊಂದಿಗೆ IIA Campus, 2nd Block, Koramangala, Sarjapur Road, Bengaluru – 560034 ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನಲ್ಲಿ ಮಹಾಶಿವರಾತ್ರಿ ಸಂಭ್ರಮ | ಶಿವನ ದರ್ಶನ ಪಡೆದು ಪುನೀತರಾದ ಭಕ್ತರು!



















