ರಾಮನಗರ : ಮಾಗಡಿ ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ತರಕಾರಿ ವ್ಯಾಪಾರಿಯ ಮೇಲೆ ನಾಯಿಯು ದಾಳಿ ನಡೆಸಿದ ಘಟನೆ ನಡೆದಿದೆ.
ಮಾಗಡಿ ಪಟ್ಟಣದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ರಾಮಕೃಷ್ಣ ಎಂಬುವವರ ಮೇಲೆ ಬೀದಿನಾಯಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿದೆ. ದಾಳಿಯಿಂದ ಗಾಯಗೊಂಡ ರಾಮಕೃಷ್ಣರನ್ನು ತಕ್ಷಣವೇ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳೀಯರು ಪಟ್ಟಣದಲ್ಲಿ ಬೀದಿನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಯ ಮಾಗಡಿ ಪಟ್ಟಣದಲ್ಲಿ ನಡೆದಿದೆ.
ಇದನ್ನೂ ಓದಿ : ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!



















