ಬೆಂಗಳೂರು: ನೀವು ಈಗಷ್ಟೇ ಐಟಿಐ ಕೋರ್ಸ್ ಮುಗಿಸಿದ್ದೀರಾ? ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ತರಬೇತಿ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ (BESCOM Recruitment 2026) ಖಾಲಿ ಇರುವ 388 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಅಥವಾ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಒಟ್ಟು ಹುದ್ದೆಗಳು : 388
ಹುದ್ದೆ ಹೆಸರು: ಟ್ರೈನಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್ ಅಥವಾ ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 9
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಟ್ರೈನಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಜನರಲ್, ಒಬಿಸಿಯವರಿಗೆ 100 ರೂಪಾಯಿ ಶುಲ್ಕವಿದ್ದರೆ, ಉಳಿದವರಿಗೆ 50 ರೂಪಾಯಿ ಶುಲ್ಕವಿದೆ.. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಮೆರಿಟ್ ಲಿಸ್ಟ್ ಹಾಗೂ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಈಗಷ್ಟೇ ಕೋರ್ಸ್ ಮುಗಿಸಿದವರು ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಇದು ಒಳ್ಳೆಯ ಅವಕಾಶವಾಗಿದೆ. ನೇಮಕಾತಿ ಹೊಂದಿದವರಿಗೆ ತರಬೇತಿ ಅವಧಿಯಲ್ಲಿಯೇ 9,600 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು hescom.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ
the Executive Engineer (V), Industrial Training Centre (ITC), HESCOM Vidyut Nagar, Karwar Road, Hubballi – 580024
ಇದನ್ನೂ ಓದಿ : ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್



















