ಮಂಗಳೂರು : ಮಂಗಳೂರು ಹೊರವಲಯದ ಉಳ್ಳಾಲ ತಾಲ್ಲೂಕಿನ ಕಾಪಿಕಾಡು ಪ್ರದೇಶದಲ್ಲಿ ಶಾಲಾ ಬಸ್ ಮತ್ತು ಮೀನು ಸಾಗಾಟದ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ.
ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲೆಗೆ ಸೇರಿದ ಶಾಲಾ ಬಸ್ ವಿದ್ಯಾರ್ಥಿಗಳನ್ನು ಹೆದ್ದಾರಿ ಅಂಚಿನಲ್ಲಿ ಹತ್ತಿಸಿಕೊಂಡು ತಲಪಾಡಿ ಕಡೆಗೆ ತೆರಳುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಮೀನು ಸಾಗಾಟದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗೋವಾದಿಂದ ಕೇರಳ ಕಡೆಗೆ ತೆರಳುತ್ತಿದ್ದ ಕ್ಯಾಂಟರ್‌ನ್ನು ಕುಂದಾಪುರ ಮೂಲದ ಚಾಲಕ ಸಂಜೀವ ಚಲಾಯಿಸುತ್ತಿದ್ದು, ನಿದ್ರೆಯ ಮಂಪರಿನಲ್ಲಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಉಳ್ಳಾಲ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!



















