ಬೆಂಗಳೂರು: ಕರ್ನಾಟಕದಲ್ಲಿರುವ ವಸತಿ ಶಾಲೆಗಳ ಪ್ರವೇಶಾತಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಇದರಿಂದಾಗಿ, ವಸತಿ ಶಾಲೆಗಳಿಗೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಸಿಕ್ಕಂತಾಗಿದೆ. ಆರನೇ ತರಗತಿಗೆ ಪ್ರವೇಶಾತಿ ಪಡೆಯಲು ಬಯಸುವ ವಿದ್ಯಾರ್ಥಿಗಳು ಈಗ ಫೆಬ್ರವರಿ 28ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು (MDRS), ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ ಪ್ರವೇಶಾತಿ ಬಯಸುವವರು ಈಗ ಅರ್ಜಿ ಸಲ್ಲಿಸಬಹುದಾಗಿದೆ. ಸಮೀಪದ ಅಲ್ಪಸಂಖ್ಯಾತರ ವಸತಿ ಶಾಲೆ, ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗಳು, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರಿಗೆ ಕೆಲ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿ ಆಗಿರಬೇಕು. 10-12 ವರ್ಷದೊಳಗಿನವರಾಗಿರಬೇಕು. ಕುಟುಂಬದ ಆದಾಯದ ಮಿತಿಯು ಸರ್ಕಾರ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು. 5ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಸಲ್ಲಿಸಬೇಕಾದ ದಾಖಲೆಗಳು
ವಿದ್ಯಾರ್ಥಿಯ ಆಧಾರ್ ಕಾರ್ಡ್
ಪೋಷಕರ ಆಧಾರ್ ಕಾರ್ಡ್
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಐದನೇ ತರಗತಿ ಉತ್ತೀರ್ಣ ಪ್ರಮಾಣ ಪತ್ರ
ಸ್ಟಡಿ ಸರ್ಟಿಫಿಕೇಟ್
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಸರ್ಕಾರದ ಸೇವಾ ಸಿಂಧು https://sevasindhu.karnataka.gov.in/ ಗೆ ಭೇಟಿ ನೀಡಬೇಕು
MDRS 6th Admission 2026-27 ಮೇಲೆ ಕ್ಲಿಕ್ ಮಾಡಬೇಕು
ಹೊಸ ನೋಂದಣಿ ಮೇಲೆ ಕ್ಲಿಕ್ ಮಾಡಬೇಕು
ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಅರ್ಜಿಯ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ರಾಜ್ಯ ಸರ್ಕಾರದ HESCOM ಸಂಸ್ಥೆಯಲ್ಲಿ 388 ಹುದ್ದೆಗಳ ನೇಮಕ : ಐಟಿಐ ಮುಗಿಸಿದವರಿಗೆ ಗುಡ್ ನ್ಯೂಸ್


















