ದಾವಣಗೆರೆ | ನಗರದ ಹಳೆಯ ಪಿಬಿ ರಸ್ತೆಯಲ್ಲಿ ಎಲ್‌ಐಸಿ ಕಚೇರಿ ಎದುರಿನ ಮಾರುತಿ ಗ್ಯಾರೇಜ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನಾಲ್ಕು ಕಾರುಗಳು ಹಾಗೂ ಒಂದು ಕ್ರಷರ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಅರುಣ್ ಎಂ.ಪಿ ಅವರಿಗೆ ಸೇರಿದ ಗ್ಯಾರೇಜ್‌ನಲ್ಲಿ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಒಂದು ಬುಲೆರೋ, ಒಂದು ಇಕಾನ್, ಐ-20 ಕಾರು ಸೇರಿದಂತೆ ಒಟ್ಟು ನಾಲ್ಕು ವಾಹನಗಳು ಹಾಗೂ ಒಂದು ಕ್ರಷರ್ ಬೆಂಕಿಗಾಹುತಿಯಾಗಿವೆ.
ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಸಕಾಲಕ್ಕೆ ಕ್ರಮ ಕೈಗೊಂಡ ಪರಿಣಾಮ ಬೆಂಕಿ ಅಕ್ಕಪಕ್ಕದ ಅಂಗಡಿಗಳು, ಗ್ಯಾರೇಜ್‌ಗಳು ಹಾಗೂ ಶೋ ರೂಮ್‌ಗಳಿಗೆ ವ್ಯಾಪಿಸುವುದನ್ನು ತಡೆಗಟ್ಟಲಾಯಿತು. ಘಟನಾ ಸ್ಥಳದ ಸುತ್ತಮುತ್ತ ಹತ್ತಾರು ವ್ಯಾಪಾರ ಸಂಸ್ಥೆಗಳು ಇರುವ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ಘಟನೆ ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ಪೊಲೀಸರು ಹಾಗೂ ಅಗ್ನಿಶಾಮಕ ಇಲಾಖೆ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ



















