ಬೆಂಗಳೂರೂ : ನಗರದ ಚಂದ್ರಾಲೇಔಟ್ನ ಬಿಎಂಟಿಸಿ ಡಿಪೋ ಬಳಿ ಖಾಸಗಿ ಬಸ್ವೊಂದು ಹೊತ್ತಿ ಉರಿದಿದೆ. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ ಎನ್ನಲಾಗಿದೆ.
ಬೆಂಕಿಯ ಜ್ವಾಲೆ ಬಸ್‌ನ ಅಕ್ಕಪಕ್ಕ ನಿಲ್ಲಿಸಿದ್ದ ಇತರ ವಾಹನಗಳಿಗೂ ಹಬ್ಬಿ, ಅವಕ್ಕೂ ಹಾನಿಯಾಗಿವೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಬಸ್ ಹೊತ್ತಿ ಉರಿಯಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್, ಡೀಸೆಲ್ ಟ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅಥವಾ ಕಿಡಿಗೇಡಿಗಳ ಕೃತ್ಯವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು, ಕೊಲೆ ಮಾಡಿ ಡ್ರಮ್‌ನಲ್ಲಿ ಅಡಗಿಸಿಟ್ಟ ಪಾಪಿ!



















