ಬೆಂಗಳೂರು : ಅಸ್ಸಾಂ ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್ ನಾಳೆ ಮೊದಲ ಬಾರಿಗೆ ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಅಸ್ಸಾಂನಲ್ಲಿ ಮುಂಬರುವ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಚುನಾವಣಾ ವೀಕ್ಷಕರ ಸಭೆಯಲ್ಲಿ ಡಿಕೆಶಿ ಭಾಗವಹಿಸಲಿದ್ದಾರೆ. ಚುನಾವಣಾ ತಯಾರಿ ಹಾಗೂ ಸಂಘಟನೆ ಬಲಪಡಿಸುವ ಬಗ್ಗೆ ಪ್ರಮುಖ ಚರ್ಚೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ತೆಲಂಗಾಣ, ಕೇರಳ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಉಸ್ತುವಾರಿವಹಿಸಿದ್ದ ಡಿಕೆಶಿಗೆ ಮಿಶ್ರ ಫಲಿತಾಂಶ ಸಿಕ್ಕಿತ್ತು. ಅಸ್ಸಾಂ ಚುನಾವಣೆಯು ರಾಜಕೀಯವಾಗಿ ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ, ಡಿಕೆಶಿ ನೇಮಕಾತಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಹುಟ್ಟಿಸಿದೆ.
ಇದನ್ನೂ ಓದಿ : ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ ನಿವೃತ್ತ ಇಸ್ರೋ ನೌಕರ!



















