ಬೆಂಗಳೂರು : ನೀವು ಗದಗ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಹೌದು, ಗದಗದಲ್ಲಿರುವ ತಾಲೂಕು ಕಾನೂನು ಸೇವೆಗಳ ಸಮಿತಿಯಲ್ಲಿ (TLSC Gadag Recruitment 2026) ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ಕ್ಲರ್ಕ್ ಹಾಗೂ ಒಂದು ಪ್ಯೂನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ತಾಲೂಕು ಕಾನೂನು ಸೇವೆಗಳ ಸಮಿತಿ (TLSC)
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 21
ಉದ್ಯೋಗ ಸ್ಥಳ: ಗದಗ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವವರು ಮೊದಲಿಗೆ gadag.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ Member Secretaries, Taluka Legal Services Committee, Court Complex, Lakshmeshwar, Gadag ವಿಳಾಸಕ್ಕೆ ಪೋಸ್ಟ್ ಮಾಡಬಹುದಾಗಿದೆ.
ಇದನ್ನೂ ಓದಿ : ಸಿಗರೇಟ್ ಕೇಳುವ ನೆಪದಲ್ಲಿ ಬಂದ ಖತರ್ನಾಕ್ ಕಳ್ಳ.. ವೃದ್ಧೆಯ ಮಾಂಗಲ್ಯ ಸರ ಕಿತ್ತು ಪರಾರಿ!



















