ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿರುವ ಪರಿಣಾಮ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಮೈಲಾರಪ್ಪ (80) ಎಂದು ಗುರುತಿಸಲಾಗಿದೆ.
ಮೈಲಾರಪ್ಪ ಕೆಂಗೇರಿಯಲ್ಲಿ ತಮ್ಮ ಮೊಮ್ಮಗನೊಂದಿಗೆ ವಾಸವಿದ್ದಿದ್ದು, ನಿನ್ನೆ ಮೊಮ್ಮಗ ಹೊರಗಡೆ ಹೋಗಿದ್ದ ವೇಳೆ ಮನೆಯಲ್ಲಿ ಒಬ್ಬಂಟಿಯಾಗಿ ಇದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಪ್ರಾಥಮಿಕ ತನಿಖೆ ಪ್ರಕಾರ, ಮನೆಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆಯಿಂದ ಉಸಿರುಗಟ್ಟಿ ಮೈಲಾರಪ್ಪ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಕೆಂಗೇರಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಹೆಸರು ಬದಲಿಸಿಕೊಳ್ಳಿ ಎಂದವರ ವಿರುದ್ದ ಸಿಡಿದೆದ್ದ ಸುಹಾನಾ ಸೈಯದ್.. ಖಡಕ್ ವಾರ್ನಿಂಗ್!



















