ಬೆಂಗಳೂರು : ಹಾವೇರಿಯಲ್ಲಿರುವ ಕೇಂದ್ರ ಸರ್ಕಾರದ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ (Kendriya Vidyalaya Haveri Recruitment 2026) ಮಾಡಿಕೊಳ್ಳಲಾಗುತ್ತಿದೆ. ಸ್ಪೋರ್ಟ್ಸ್ ಕೋಚ್, ಪ್ರಾಥಮಿಕ ಶಿಕ್ಷಕರು ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರೊಂದಿಗೆ ಹಾವೇರಿಯಲ್ಲಿ ವೃತ್ತಿಜೀವನ ಕಟ್ಟಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಕೇಂದ್ರೀಯ ವಿದ್ಯಾಲಯ, ಹಾವೇರಿ
ಹುದ್ದೆ ಹೆಸರು: ಶಿಕ್ಷಕರು
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಹಾವೇರಿ
ಸಂದರ್ಶನ ನಡೆಯುವ ದಿನಾಂಕ: ಫೆಬ್ರವರಿ 24
ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಥಮಿಕ ಶಿಕ್ಷಕರು, ಟಿಜಿಟಿ, ಪಿಆರ್ ಟಿ ಮ್ಯೂಸಿಕಲ್ ಟೀಚರ್, ಕ್ರೀಡಾ ತರಬೇತುದಾರ, ಸ್ಪೆಷಲ್ ಎಜುಕೇಟರ್, ಕನ್ನಡ ಲಾಂಗ್ವೇಜ್ ಇನ್ ಸ್ಟ್ರಕ್ಟರ್ ಸೇರಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಎಡ್, ಪದವಿ, ಬಿಎ (ಮ್ಯೂಸಿಕ್), ಡಿಪ್ಲೋಮಾ, ಸ್ನಾತಕೋತ್ತರ ಪದವಿ ಪಡೆದವರು ಸಂದರ್ಶನಕ್ಕೆ ಹಾಜರಾಗಬಹುದು.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 26,250 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ haveri.kvs.ac.in ಗೆ ಭೇಟಿ ನೀಡಬೇಕು. ನೇರ ಸಂದರ್ಶನಕ್ಕೆ ಹಾಜರಾಗುವವರು ಅಗತ್ಯ ದಾಖಲೆಗಳನ್ನು ತರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
Kendriya Vidyalaya Haveri, DIET Campus, Karjagi Road, Haveri-581110, Karnataka
ಇದನ್ನೂ ಓದಿ : ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!



















