ಮಂಗಳೂರು : ಬಾಲಕನೋರ್ವ ಚೆಂಡು ಎಂದು ಭಾವಿಸಿ ಬ್ಯಾಟ್‌ನಿಂದ ಹೊಡೆದಾಗ ಅದು ಸ್ಫೋಟಗೊಂಡಿರುವ ಆಘಾತಕಾರಿ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ನಡೆದಿದೆ.
ಅಭೀಶ್ ಎಂಬ ಬಾಲಕ ಗಾಯಗೊಂಡಿದ್ದಾನೆ. ಬಾಲಕ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ ವೇಳೆ ಚೆಂಡಿನಂತಹ ವಸ್ತು ಪತ್ತೆಯಾಗಿದೆ. ಆಗ ಬಾಲ್ ರೀತಿ ಇದ್ದ ಬಾಂಬ್‌ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್‌ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭಿ ಗಾಯಗೊಂಡಿದ್ದಾನೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್ ಎಂದು ಶಂಕಿಸಲಾಗಿದೆ. ಸದ್ಯ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಸ್ಫೋಟಕ ಬಬಲಾದಿ ಭವಿಷ್ಯ.. ಸಿಎಂ ಕುರ್ಚಿ ಬದಲಾಗುತ್ತಾ?



















