ಗದಗ : ದುರುಳರು ಮತ್ತೆ ಹಿಂದೂ ದೇವಾಲಯಗಳಲ್ಲಿನ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಈ ಘಟನೆಗೆ ಸ್ಥಳೀಯರು ಕೆಂಡಾಮಂಡಲವಾಗಿದ್ದಾರೆ. ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.
ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ದೇವರ ಮೂರ್ತಿಗಳನ್ನು ದುರುಳರು ಧ್ವಂಸಗೊಳಿಸಿದ್ದಾರೆ. ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಈಶ್ವರ, ನಂದಿ ಹಾಗೂ ಹೊನ್ನತ್ತೆಮ್ಮ ದೇವರುಗಳ ಮೂರ್ತಿಗಳನ್ನು ದುರುಳರು ಧ್ವಂಸಗೊಳಿಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೆ ಅಂತಹ ಪ್ರಕರಣ ನಡೆದಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಮಲ್ಲಿಕಾರ್ಜುನಪುರದ ಗಾಳಿ ಬಸವೇಶ್ವರ ದೇವಸ್ಥಾನ ಶಿವಲಿಂಗ, ಪಾಣಿಪೀಠ ಹಾಗೂ ಆದರಳ್ಳಿ ಸಮೀಪದ ದಂಡೇರಿ ಮರಿಯಮ್ಮ ದೇವರುಗಳ ಮೂರ್ತಿ ಭಗ್ನಗೊಳಿಸಿದ್ದಾರೆ. ಮರಿಯಮ್ಮ ದೇವಿ ಮುಖಕ್ಕೆ ಕೀಚಕರು ಮಸಿ ಬಳಿದು ಮುಖ ಧ್ವಂಸಗೊಳಿಸಿದ್ದಾರೆ.
ಮುಂಡರಗಿ ಹಾಗೂ ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಘಟನೆ ನಡೆದಿದೆ. ಹಿಂದೂ ದೇವರುಗಳನ್ನೇ ಈ ರೀತಿ ಧ್ವಂಸಗೊಳಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ದುಷ್ಟರನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಆದರೆ ಪೊಲೀಸರು ನೀಚರನ್ನು ಪತ್ತೆ ಹಚ್ಚಿ ಶಿಕ್ಷಿಸುತ್ತಾರಾ ಕಾಯ್ದು ನೋಡಬೇಕಿದೆ.
ಇದನ್ನೂ ಓದಿ : ಶತ್ರುಗಳಿಗೆ ಶಾಪ ಹಾಕಬೇಕೇ, 600 ರೂ. ಕೊಟ್ರೆ ಸಾಕು | ಹಾಂಕಾಂಗ್‌ನ ‘ಚಪ್ಪಲಿ ಪೂಜೆ’ ಇದೀಗ ಭಾರೀ ವೈರಲ್!



















