ಬೆಂಗಳೂರು : ರಾಮನಗರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ (DHFWS Ramanagara Recruitment 2026) ಖಾಲಿ ಇರುವ 02 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎರಡು ಮೆಡಿಕಲ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ನೇಮಕಾತಿ ನಡೆಸಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ಹುದ್ದೆ ಹೆಸರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ
ಒಟ್ಟು ಹುದ್ದೆ: 02
ಉದ್ಯೋಗ ಸ್ಥಳ: ರಾಮನಗರ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 31
ಅರ್ಜಿ ಸಲ್ಲಿಕೆಯ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅಭ್ಯರ್ಥಿಗಳು ಸಲ್ಲಿಸುವ ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bengalurusouth.nic.in ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಅದನ್ನು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ District Health and Family Welfare Office, Ramanagara, Karnataka ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಇದನ್ನೂ ಓದಿ : ಕಾಡಾನೆ ಸೆರೆಗೆ ಹೋಗಿದ್ದ ಅರ್ಜುನ ಕಾಡಿನ ಪಾಲು!



















