ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯದಲ್ಲಿ (Forest) ರುಂಡವಿಲ್ಲದ ಮಹಿಳೆಯೊಬ್ಬರ ಬೆತ್ತಲೆ ದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.
ಈ ಸುದ್ದಿ ಹಬ್ಬುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರುಂಡವಿಲ್ಲದ ದೇಹ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಇಂದು ಸಂಜೆ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮುಂಡಗೋಡು ಪೊಲೀಸರು ಆಗಮಿಸಿ ಪರಿಶಈಲನೆ ನಡೆಸಿದ್ದಾರೆ. ಅತ್ಯಾಚಾರ ಮಾಡಿ ಮಹಿಳೆಯನ್ನು ಕೊಂದು ಹಾಕಿರಬಹುದಾ? ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯ ನಂತರ ಎಲ್ಲ ವಿಷಯಗಳು ತಿಳಿದು ಬರಲಿದೆ.
ಇದನ್ನೂ ಓದಿ : SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್



















