ಬೆಂಗಳೂರು : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಮಗ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ಪಿಎಸ್ ಚಂದ್ರು ಎಂಬುವವರ ಮಗ ಹೇಮಂತ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿಯೇ ಹೇಮಂತ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಕಳೆದ ರಾತ್ರಿ ಘಟನೆ ನಡೆದಿದ್ದು, ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಹೇಮಂತ್ ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : KPME ನಿಯಮ ಉಲ್ಲಂಘನೆ | 28 ಆಸ್ಪತ್ರೆಗಳಿಂದ ಭಾರೀ ದಂಡ ವಸೂಲಿಗೆ ಆದೇಶ!



















