ಬೆಂಗಳೂರು: 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕುಲಪತಿಗಳ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ವಿವಿ ಕುಲಪತಿಗಳೂ ಒಪ್ಪಿಗೆ ಸೂಚಿಸಿದ್ದಾರೆ.
ಸಿಎಂ ಹೇಳಿದ್ದು ಏನು?
ಇಂದಿನ ದಿನಗಳಲ್ಲಿ ಯುವಜನರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಚಿಂತನೆ ಇದೆ. ಈ ಬಗ್ಗೆ ನಮಗೆ ಸಲಹೆ ಕೊಡಿ. ಇದು ವಯಸ್ಕರಿಗೆ ಅಲ್ಲ, 16 ವರ್ಷದೊಳಗಿನ ವಿದ್ಯಾರ್ಥಿಗಳ ಫೋನ್ ಬ್ಯಾನ್ ಮಾಡೋ ಚಿಂತನೆ. ಆಸ್ಟ್ರೇಲಿಯಾ ಸೇರಿ ಅನೇಕ ದೇಶಗಳಲ್ಲಿ ಇದನ್ನ ಮಾಡಿದ್ದಾರೆ. ಏಕೆಂದ್ರೆ ಸೋಷಿಯಲ್ ಮೀಡಿಯಾಗಳಿಂದ ವಿದ್ಯಾರ್ಥಿಗಳು ಹಾಳಾಗ್ತಾ ಇದ್ದಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಿಎಂ ಪ್ರಸ್ತಾಪಿಸಿದ್ರು.
ಇದಕ್ಕೆ ಸಹಮತ ವ್ಯಕ್ತಪಡಿಸಿದ ಕುಲಪತಿಗಳು 16 ವರ್ಷ ಒಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವಂತೆ ಸಲಹೆ ನೀಡಿದರು.
ಮುಂದುವರಿದು ಮಾತನಾಡಿದ ಸಿಎಂ, ಡ್ರಗ್ಸ್ ಒಂದು ಪಿಡುಗು ಆಗಿದೆ. ವಿವಿ ಕ್ಯಾಂಪಸ್‌ಗಳು ಡ್ರಗ್ಸ್ ಮುಕ್ತ ಆಗಬೇಕು. ಡ್ರಗ್ಸ್ ಮಾಫಿಯಾಗಳಿಗೆ ಕಡಿವಾಣ ಹಾಕಬೇಕು ಎಂದು ಕುಲಪತಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ಇದನ್ನೂಓದಿ: ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!



















