ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡ್ರಕ್ಕಿ ಗ್ರಾಮದಲ್ಲಿ ಕುರಿ ಕಳ್ಳತನಕ್ಕೆ ಬಂದಿದ್ದ ಖತರ್ನಾಕ್ ಕಳ್ಳರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ತಡರಾತ್ರಿ ಕುರಿ ಕಳವು ಮಾಡಲು ದೊಡ್ಡಿಗೆ ತೆರಳಿದ್ದ ಕಳ್ಳರು ಈ ವೇಳೆ ಕುರಿಗಾಯಿಗಳಿಗೆ ತಿಳಿದಿದೆ. ಅನುಮಾನಾಸ್ಪದವಾಗಿ ಅಲೆದಾಡುತ್ತಿದ್ದವರನ್ನು ಹಿಡಿದ ಗ್ರಾಮಸ್ಥರು ಕಳ್ಳರನ್ನು ವಶಕ್ಕೆ ಪಡೆದು, ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಆರೋಪಿಗಳನ್ನು ಗುರುಮಠಕಲ್ ಪೊಲೀಸರಿಗೆ ಒಪ್ಪಿಸಲಾಗಿದೆ.
ಇತ್ತೀಚೆಗೆ ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಕಳ್ಳತನ ಭೇದಿಸುವುದು ಪೊಲೀಸರಿಗೆ ಸವಾಲಾಗಿತ್ತು. ಈ ಹಿನ್ನೆಲೆಯಲ್ಲಿ ಕಳ್ಳರನ್ನು ಹಿಡಿದಿರುವುದು ಗ್ರಾಮಸ್ಥರಲ್ಲಿ ನೆಮ್ಮದಿ ಮೂಡಿಸಿದೆ. ಪ್ರಕರಣ ಸಂಬಂಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮುಂದುವರಿದಿದೆ.
ಇದನ್ನೂ ಓದಿ: ತೆರಿಗೆ ಬಾಕಿ ಉಳಿಸಿಕೊಂಡ 5 ಆಸ್ತಿಗಳ ಹರಾಜು.. ಕಠಿಣ ಕ್ರಮಕ್ಕಾಗಿ ಮುಂದಾದ GBA



















