ಬೆಂಗಳೂರು: ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (WCD Bangalore Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಚೇರ್ ಪರ್ಸನ್ ಹಾಗೂ ಮೆಂಬರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತರು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಂಗಳೂರು
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 9
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿಯಮಗಳಂತೆ ಅರ್ಜಿ ಸಲ್ಲಿಸುವವರಿಗೆ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 35 ವರ್ಷಗಳಿಂದ ಗರಿಷ್ಠ 60 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ dwcd.karnataka.gov.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Karnataka State Commission for Protection of Child Rights 4th Floor, Krishi Bhavan, Kittur Rani Chennamma Circle Hadnan Circle) Bangalore -560002
ಇದನ್ನೂ ಓದಿ : ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ



















