ಬೆಂಗಳೂರು: ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ಬಳಿ ಶಾಲಾ ಬಸ್ ಅಪಘಾತ ಸಂಭವಿಸಿದೆ. ಇಳಿಜಾರಿನಲ್ಲಿ ಸಾಗುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿ ಬಸ್ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ.
ಮಕ್ಕಳನ್ನು ಪಿಕ್ ಮಾಡುತ್ತಿದ್ದ ನ್ಯಾಶನಲ್ ಪಬ್ಲಿಕ್ ಸ್ಕೂಲ್‌ಗೆ ಸೇರಿದ ಶಾಲಾ ಬಸ್ ಇದಾಗಿದ್ದು, ಏಕಾಏಕಿ ಬ್ರೇಕ್ ಕೈಕೊಟ್ಟ ಕಾರಣ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪವಾಡ ಸದೃಶವಾಗಿ ಬಸ್‌ನಲ್ಲಿದ್ದ ಎಲ್ಲಾ ಮಕ್ಕಳು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಮಲ್ಲೇಶ್ವರ ಸಂಚಾರ ವಿಭಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ.. ಆಫೀಸ್‌ಗೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ!



















