ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.
ಮೃತ ಬಾಲಕನನ್ನು ಮುಝುಮ್ಮಿಲ್ (14) ಎಂದು ಗುರುತಿಸಲಾಗಿದೆ. ಆತ ಚಮನ್ ಸಾಬ್ ಹಾಗೂ ಫಾತಿಮಾ ದಂಪತಿಯ ಪುತ್ರನಾಗಿದ್ದು, ರಾಜೀವ ಗಾಂಧಿ ರೆಸಿಡೆಸ್ನಿಯಲ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.
ನಿನ್ನೆ ಬೆಳಗಿನ ಜಾವ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ ಮುಝುಮ್ಮಿಲ್, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಇದನ್ನೂ ಓದಿ : ಕಾರಿನಲ್ಲಿ ಬಂದ ಯುವಕನಿಂದ ವೃದ್ಧನ ಮೇಲೆ ಅಮಾನುಷ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ



















