ಮೈಸೂರು: ಪತಿಯ ಮಾನಸಿಕ ಹಾಗೂ ದೈಹಿಕ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಹೆಬ್ಬಾಳದಲ್ಲಿ ನಡೆದಿದೆ.
ಪ್ರತಿಭಾಶ್ರೀ (29) ಮೃತ ದುರ್ದೈವಿ. ಅರಕಲಗೂಡು ತಾಲೂಕಿನ ಯಲಗತಹಳ್ಳಿಯವರಾದ ಪ್ರತಿಭಾಶ್ರೀ, ಐದು ವರ್ಷಗಳ ಹಿಂದೆ ಅನಿಲ್ ಕುಮಾರ್ ಎಂಬಾತನೊಂದಿಗೆ ವಿವಾಹವಾಗಿ ಕೂರ್ಗಳ್ಳಿಯಲ್ಲಿ ವಾಸಿಸುತ್ತಿದ್ದರು.
ಇತ್ತೀಚೆಗೆ ಪತಿ ಮದ್ಯಪಾನ ಚಟಕ್ಕೆ ದಾಸನಾಗಿದ್ದು, ಕುಡಿದು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದನೆಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ. ಕಿರುಕುಳದಿಂದ ಬೇಸತ್ತ ಪ್ರತಿಭಾಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಬ್ಬಾಳ ಪೊಲೀಸ್ ಸ್ಟೇಷನ್‌ನಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಬೆಳಗಾವಿ | ಗರ್ಭಿಣಿ ಪತ್ನಿಗೆ ಚಾಕು ಇರಿದು ಬಾವಿಗೆ ಹಾರಿ ಆತ್ಮ*ತ್ಯೆ ಮಾಡಿಕೊಂಡ ಪತಿ



















