ಬೆಂಗಳೂರು : ನೀವು ಎಂಬಿಬಿಎಸ್ ಮುಗಿಸಿ, ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಕಾಯುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ (NABARD Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD)
ಖಾಲಿ ಹುದ್ದೆಗಳ ಸಂಖ್ಯೆ: ವಿವಿಧ
ಹುದ್ದೆಯ ಸ್ಥಳ: ವಿಜಯನಗರ, ಬೆಂಗಳೂರು
ಹುದ್ದೆಯ ಹೆಸರು: ಮೆಡಿಕಲ್ ಆಫೀಸರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 15
ಕರ್ನಾಟಕದ ವಿಜಯನಗರ ಹಾಗೂ ಬೆಂಗಳೂರಿನಲ್ಲಿ ಕೆಲಸ ಮಾಡಲು ಬಯಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 70 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು nabard.org ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು. ನೇಮಕಾತಿ ಹೊಂದಿದವರಿಗೆ ಪ್ರತಿ ವಿಸಿಟ್ ಗೆ 1 ಸಾವಿರ ರೂಪಾಯಿಯಿಂದ 1,200 ರೂಪಾಯಿವರೆಗೆ ಗೌರವಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಚೀಫ್ ಜನರಲ್ ಮ್ಯಾನೇಜರ್, ಕರ್ನಾಟಕ ಪ್ರಾದೇಶಿಕ ಕಚೇರಿ, ನಬಾರ್ಡ್ ಟವರ್, 46, ಕೆಂಪೇಗೌಡ ರಸ್ತೆ, ಬೆಂಗಳೂರು-560009
ಇದನ್ನೂ ಓದಿ : ವೈಯಕ್ತಿಕ ದ್ವೇಷದಿಂದ ಕುಲದೀಪ್ ಯಾದವ್‌ರನ್ನು ತಂಡದಿಂದ ಕೈಬಿಟ್ಟ ಸೂರ್ಯಕುಮಾರ್ ಯಾದವ್?


















