ಬೆಂಗಳೂರು : ಬೆಂಗಳೂರಿನ ಕೋಗಿಲು ಕ್ರಾಸ್ ಪ್ರದೇಶದಲ್ಲಿ ನಡೆದ ಮನೆಗಳ ಡೆಮಾಲಿಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಐಎಎಸ್ ಅಧಿಕಾರಿಗಳು ಹಾಗೂ ಒಬ್ಬ ಐಪಿಎಸ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ 7ನೇ ಎಸಿಜೆಎಂ ಕೋರ್ಟ್ ಸೂಚನೆ ನೀಡಿದೆ.
ಕೋಗಿಲು ಕ್ರಾಸ್‌ನಲ್ಲಿ ಸುಮಾರು 200 ಮನೆಗಳನ್ನು ಡೆಮಾಲಿಷನ್ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ 7ನೇ ಎಸಿಜೆಎಂ ಕೋರ್ಟ್, ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದೆ.

ಡೆಮಾಲಿಷನ್ ಕಾರ್ಯವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಡೆದಿತ್ತು. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳಾದ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಬಿಎಸ್‌ಡಬ್ಲೂಎಂಎಲ್ ಸಿಇಓ ಕರೀಗೌಡ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಕ್ರಮಕ್ಕೆ ಕೋರ್ಟ್ ಸೂಚಿಸಿದೆ.
ಡೆಮಾಲಿಷನ್ ಕ್ರಮದ ವೇಳೆ ಕಾನೂನು ಪ್ರಕ್ರಿಯೆ ಅನುಸರಿಸಲಾಯಿತೇ ಎಂಬ ಪ್ರಶ್ನೆಯನ್ನು ಅರ್ಜಿದಾರರು ಎತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಸಂಬಂಧಿತ ಅಧಿಕಾರಿಗಳಿಂದ ಪ್ರತಿಕ್ರಿಯೆ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ : ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್



















