ಬೆಂಗಳೂರು : ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗೆ ಪರಿಹಾರ ಕೊಡುವ ಇಚ್ಚಾಶಕ್ತಿ ಸರ್ಕಾರಕ್ಕೆ ಇಲ್ಲ. ಎಲ್ಲ ಸಮಸ್ಯೆಗೂ ನಿರ್ಲಕ್ಷ್ಯ ಧೋರಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ವಿಜಯೇಂದ್ರ, ಎಲ್ಲದಕ್ಕು ಹಿಂದಿನ ಬಿಜೆಪಿ ಸರ್ಕಾರ ದೂರೋದು, ಕೇಂದ್ರದ ಕಡೆ ಬೊಟ್ಟು ಮಾಡೋದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ ಸರ್ಕಾರದ ಮನೆ ದೇವರೇ ಸುಳ್ಳು. ಸುಳ್ಳಾಟ ಕಳ್ಳಾಟ ಎಲ್ಲವನ್ನೂ ನಿಲ್ಲಿಸಿ, ಅನುಭವಿ ಸಿಎಂ, ಸಮಸ್ಯೆಗಳಿಗೂ ಪರಿಹಾರ ಕೊಡಿ ಎಂದು ಹೇಳಿದ್ದಾರೆ.
ಈ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ, ಎಂಎಲ್‌ಸಿ ಎಸ್.ವಿ ಸಂಕನೂರ್, ಮಾಜಿ ಸಂಸದ ಮುನಿಸ್ವಾಮಿ, ಜಿಲ್ಲಾಧ್ಯಕ್ಷ ಎಸ್ ಹರೀಶ್ ಉಪಸ್ಥಿತರಿದ್ದರು.
ಇದನ್ನೂ ಓದಿ : ಶೀತ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಗುವಿನ ಕಿರುಬೆರಳನ್ನೇ ಕಟ್ ಮಾಡಿದ ವೈದ್ಯರು?



















