ಬೆಂಗಳೂರು : ಆರೋಗ್ಯ ಇಲಾಖೆ ಕಾರ್ಯಕ್ರಮಕ್ಕೆ ಉರ್ದು ಭಾಷೆಯಲ್ಲಿ ಆಹ್ವಾನ ಪತ್ರಿಕೆ ಮುದ್ರಣಗೊಂಡಿರುವ ವಿಚಾರಕ್ಕೆ ಕನ್ನಡ ಹೋರಾಟಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿದ್ದು, ಕರ್ನಾಟಕವನ್ನು ಸರ್ಕಾರ ಪಾಕಿಸ್ತಾನ ಮಾಡಲು ಹೊರಟಿದೆಯೇ? ಎಂದು ಆಕ್ರೋಶ ಹೊರಹಾಕಿದ್ದಾರೆ.
ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂಬ ನಿರೀಕ್ಷೆಯ ನಡುವೆ ಇಂತಹ ಎಡವಟ್ಟು ಸಂಭವಿಸಿರುವುದು ಆಶ್ಚರ್ಯಕರ ಎಂದು ಹೇಳಿದ ಅವರು, ಕನ್ನಡದ ರಾಮಯ್ಯ ಸರ್ಕಾರದಲ್ಲಿ ಇಂತಹ ತಪ್ಪು ನಿರೀಕ್ಷಿಸಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮುಂದೆ ಇಂತಹ ತಪ್ಪುಗಳು ಮರುಕಳಿಸದಂತೆ ಸರ್ಕಾರ ಎಚ್ಚರ ವಹಿಸಬೇಕು ಎಂದು ಮನವಿ ಮಾಡಿರುವ ಕರವೇ ನಾಯಕರು, ಭಾಷಾ ವಿಚಾರದಲ್ಲಿ ಸಂವೇದನಾಶೀಲತೆ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಕನ್ನಡಪರ ಸಂಘಟನೆಗಳು ಕೂಡ ಆಗ್ರಹಿಸಿವೆ.
ಇದನ್ನೂ ಓದಿ : ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯ.. ಉರ್ದುವಿನಲ್ಲಿ ಆಹ್ವಾನ ಪತ್ರಿಕೆ ಪ್ರಿಂಟ್!


















