ಚಿಕ್ಕಬಳ್ಳಾಪುರ : ಮಹಿಳೆಯೊಬ್ಬರು ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ. ರೇಖಾ (37) ಮೃತ ಮಹಿಳೆ.
ಕುಂದಲಗುರ್ಕಿ ಗ್ರಾಮದ ನಿವಾಸಿ ರೇಖಾ ಎನ್‌ಜಿಓ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ರೆಸಾರ್ಟ್ ಕಂ ಹೋಟೆಲ್‌ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ, ಸಂಜೆ 6 ಗಂಟೆಯ ನಂತರ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಆದರೆ ದುರಾದೃಷ್ಟವಶಾತ್ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕೆಲಕಾಲ ನೀರಿನಲ್ಲೇ ಇದ್ದ ರೇಖಾ, ಈಜಾಡುತ್ತಿದ್ದಾಳೆ ಅಂತಲೇ ಎಲ್ಲರೂ ಭಾವಿಸಿದ್ದಾರೆ. ಆದರೆ ಕೆಲ ನಿಮಿಷಗಳ ಕಾಲ ಮೇಲೆ ಬರದೆ ನೀರಲ್ಲೇ ಮುಳುಗಿದ್ದರಿಂದ ಅನುಮಾನಗೊಂಡ ಸಹೋದ್ಯೋಗಿಗಳು ನೀರಿನಿಂದ ಮೇಲೆ ಎತ್ತಿಕೊಂಡು ಬಂದಿದ್ದಾರೆ. ಕೂಡಲೇ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಷ್ಟರಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ಧೃಢೀಕರಿಸಿದ್ದಾರೆ. ಘಟನಾ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಇದನ್ನೂ ಓದಿ : ಚರಂಡಿಯಲ್ಲಿ ಕತ್ತು ಕೊಯ್ದು ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!



















