ಆನೇಕಲ್ : ಬೆಂಗಳೂರಿನಲ್ಲಿ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ ನಡೆದಿದೆ. ಆನೇಕಲ್ ತಾಲೂಕಿನ ಚಂದಾಪುರದ ಶೆಲ್ ಪೆಟ್ರೋಲ್ ಬಂಕ್ ಬಳಿ ದ್ವಿಚಕ್ರ ವಾಹನದಲ್ಲಿ ಮಕ್ಕಳ ಜೊತೆ ತೆರಳುತ್ತಿದ್ದಾಗ ಸವಾರ ಆಯತಪ್ಪಿ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೈಕ್ನಲ್ಲಿ ತಂದೆ ಮಕ್ಕಳನ್ನು ಶಾಲೆಗೆ ಬಿಡಲು ತೆರಳುವಾಗ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ತಂದೆ, ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಹಿನ್ನೆಲೆ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ.
ಇದನ್ನೂ ಓದಿ : ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!


















