ಕೋಲಾರ : ಕೋಲಾರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಪೇದೆ ಸಾವನ್ನಪ್ಪಿದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಫಣಸಮಾಕನಹಳ್ಳಿ ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಕೋಲಾರ–ಶ್ರೀನಿವಾಸಪುರ ಮಾರ್ಗದಲ್ಲಿ ಬೈಕ್‌ಗೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ.
ಅಪಘಾತದಲ್ಲಿ ಆನಂದ್ ಬಾಬು (40) ಮೃತಪಟ್ಟಿದ್ದಾರೆ. ಅವರು ಶ್ರೀನಿವಾಸಪುರದ ಯಲ್ದೂರು ಪೊಲೀಸ್ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆ ಆಗಿದ್ದರು. ಕೆಲಸ ಮುಗಿಸಿ ಕೋಲಾರದಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಡಿಕ್ಕಿಯ ತೀವ್ರತೆಗೆ ಬೊಲೆರೊ ವಾಹನ ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಘಟನೆ ನಂತರ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕೋಲಾರ ಎಸ್.ಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ



















