ಬೆಂಗಳೂರು: ನೀವು ಎಂಜಿನಿಯರಿಂಗ್ ಪದವಿ ಪಡೆದಿದ್ದೀರಾ? ಸರ್ಕಾರದ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಾದರೆ, ನಿಮ್ಮ ಕನಸು ನನಸು ಮಾಡಿಕೊಳ್ಳಲು ಹೊಸ ಅವಕಾಶದ ಬಾಗಿಲು ತೆರೆದಿದೆ. ಹೌದು, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 203 ಹುದ್ದೆಗಳ ನೇಮಕಾತಿಗಾಗಿ (KRCL Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ಸಂಸ್ಥೆ ಹೆಸರು : ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್
ಒಟ್ಟು ಹುದ್ದೆ : 203
ಹುದ್ದೆ ಹೆಸರು: ಟ್ರೈನಿ ಅಪ್ರೆಂಟಿಸ್
ಉದ್ಯೋಗ ಸ್ಥಳ : ಕರ್ನಾಟಕ, ಮಹಾರಾಷ್ಟ್ರ, ಗೋವಾ ಸೇರಿ ಹಲವೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 21
ಮಹಾರಾಷ್ಟ್ರ, ಗೋವಾ, ನವದೆಹಲಿ, ಜಮ್ಮು ಕಾಶ್ಮೀರ ಹಾಗೂ ಕರ್ನಾಟಕದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.26 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಒಬಿಸಿ, ಇಡಬ್ಲ್ಯೂಎಸ್ ವರ್ಗದವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಎಂಜಿನಿಯರಿಂಗ್ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ konkanrailway.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
spo.gnanadeep@krcl.co.in ಗೆ ಮೇಲ್ ಮಾಡುವ ಮೂಲಕವೂ ಅರ್ಜಿ ಸಲ್ಲಿಸಬಹುದು
ಇದನ್ನೂ ಓದಿ : ಆಧಾರ್ ಕಚೇರಿಯಲ್ಲಿ 10 ಹುದ್ದೆಗಳ ನೇಮಕ | 2.08 ಲಕ್ಷ ರೂ. ಸಂಬಳ



















