ದೇವನಹಳ್ಳಿ : ಚಾಲಕನ ಯಡವಟ್ಟಿನಿಂದ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನುಗ್ಗಿದ ಲಾರಿಯೊಂದು ಸಿಕ್ಕ ಸಿಕ್ಕ ವಾಹನಗಳಿಗೆ ಭೀಕರವಾಗಿ ಗುದ್ದಿರುವ ಘಟನೆ ಬೆಂಗಳೂರು ಉತ್ತರ ತಾಲೂಕು ಬಾಗಲೂರಿನ ಗುಂಡಪ್ಪ ಸರ್ಕಲ್ ಬಳಿ ನಡೆದಿದೆ.
ಒನ್ ವೇಯಲ್ಲಿ ವೇಗವಾಗಿ ಬಂದ ಲಾರಿ, ಎದುರು ಬರುತ್ತಿದ್ದ ಕಾರುಗಳು, ದ್ವಿಚಕ್ರ ವಾಹನಗಳು ಸೇರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ನಿಂತಿದೆ. ಘಟನೆಯ ದೃಶ್ಯ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಲಾರಿ ನುಗ್ಗಿದ ರಭಸಕ್ಕೆ ನಾಲ್ಕು ಕಾರುಗಳು, 4 ಬೈಕ್ಗಳು ಜಖಂ ಆಗಿದೆ. ವಾಹನಗಳಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿಗಳ ಪ್ರಕಾರ, ಏರ್ಪೋರ್ಟ್ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಏಕಾಏಕಿ ಲಾರಿಯ ಬ್ರೇಕ್ ಫೇಲ್ ಆಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಬಗ್ಗೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್



















