ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ ಮೃತಪಟ್ಟಿರುವವರ ಹೆಸರಿನಲ್ಲಿ ಪಡೆಯಲಾಗುತ್ತಿದೆ. ಗೃಹಜ್ಯೋತಿಯಲ್ಲಿ ಈ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದ್ದಾರೆ.
ಮೃತಪಟ್ಟಿರುವವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ತೆಗೆದುಕೊಳ್ಳಲಾಗಿದೆ. ಈ ರೀತಿ ದುರುಪಯೋಗವಾಗುವುದನ್ನು ತಪ್ಪಿಸಬೇಕು. ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆ ಎಂದು ಡಿಕೆಶಿ ಹೇಳಿದ್ದಾರೆ.
ಇದನ್ನೂ ಓದಿ : 412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ



















