ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ, ಬೆಂಗಳೂರಿನಲ್ಲೇ ಇರುವ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ (RRI Recruitment 2026) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎರಡು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್
ಒಟ್ಟು ಹುದ್ದೆಗಳು: 2
ಹುದ್ದೆಗಳ ಹೆಸರು: ರಿಸರ್ಚ್ ಅಸೋಸಿಯೇಟ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 24
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್, ಎಂ.ಇ ಅಥವಾ ಎಂ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನಕ್ಕೆ ಕರೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 31 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ rri.res.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು



















