ಬೆಂಗಳೂರು : 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 1ರಂದು ಕರಗ ಉತ್ಸವ ನಡೆಸಲು ಮುಜರಾಯಿ ಇಲಾಖೆಯು, ಧರ್ಮರಾಯ ಸ್ವಾಮಿ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ನಿರ್ಧರಿಸಿದೆ.
ಈ ಬಾರಿಯ ಬೆಂಗಳೂರು ಕರಗ ಏಪ್ರಿಲ್ -1 ರಂದು ನಡೆಯಲಿದೆ. 11 ದಿನಗಳ ಕಾಲ ನಡೆಯುವ ಕರಗ ಅದ್ಧೂರಿ ಉತ್ಸವಕ್ಕೆ ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಗುತ್ತದೆ. ಮಾರ್ಚ್ 30ರಂದು ಹಸಿ ಕರಗ ನಡೆಯಲಿದೆ. ಅದ್ರಲ್ಲೂ ಈ ಬಾರಿ ಮೈಸೂರು ದಸರಾ ಮಾದರಿಯಲ್ಲೇ ಕರಗ ಮಹೋತ್ಸವಕ್ಕೆ ಪ್ಲ್ಯಾನ್ ರೂಪಿಸುತ್ತಿದ್ದೇವೆ ಅಂತ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಏಪ್ರಿಲ್ 1 ರಂದು ನಡೆಯಲಿರುವ ಶಕ್ತ್ಯೋತ್ಸವದಲ್ಲಿ ಎ. ಜ್ಞಾನೇಂದ್ರ ಸ್ವಾಮಿ ಕರಗ ಹೊರಲಿದ್ದಾರೆ. ಕಳೆದ ವರ್ಷ 15ನೇ ಬಾರಿ ಯಶಸ್ವಿಯಾಗಿ ಕರಗ ಹೊತ್ತಿದ್ದ ಜ್ಞಾನೇಂದ್ರ ಸ್ವಾಮಿ, ಈ ಸಲ 16ನೇ ಬಾರಿಗೆ ಕರಗ ಹೊರಲಿದ್ದಾರೆ. ಆ ಮೂಲಕ ಸಿಲಿಕಾನ್ ಸಿಟಿ ಮಂದಿ ಕರಗ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಬೆಂಗಳೂರು ಕರಗ ದಕ್ಷಿಣ ಭಾರತದ ಅತ್ಯಂತ ಪುರಾತನ ಮತ್ತು ವೈಶಿಷ್ಟ್ಯಪೂರ್ಣ ಹಬ್ಬಗಳಲ್ಲಿ ಒಂದಾಗಿದೆ. ಸುಮಾರು ಶತಮಾನಗಳ ಪರಂಪರೆಯನ್ನು ಹೊಂದಿರುವ ಈ ಆಚರಣೆ, ದ್ರೌಪದಿ ದೇವಿಯ ಭಕ್ತಿಭಾವದೊಂದಿಗೆ ಆಳವಾದ ಸಂಪರ್ಕ ಹೊಂದಿದೆ. ಪ್ರತೀ ವರ್ಷ ಚೈತ್ರ ಮಾಸದ ಪೌರ್ಣಮಿಯ ಸಂದರ್ಭದಲ್ಲಿ ನಡೆಯುವ ಈ ಉತ್ಸವವು ಸಾಮಾನ್ಯವಾಗಿ 9 ರಿಂದ 11 ದಿನಗಳವರೆಗೆ ನಡೆಯುತ್ತದೆ.
ಇದನ್ನೂ ಓದಿ : ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್.ಅಶೋಕ್



















