ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಾಲಗುಂದಾ ಗ್ರಾಮದಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮನೆಯು ಹೊತ್ತಿ ಉರಿದ ಘಟನೆ ನಡೆದಿದೆ.
ಸಾಲಗುಂದ ಗ್ರಾಮದ ರಾಜೂನಾಯ್ಕ್ ಅವರ ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 2 ಲಕ್ಷಕ್ಕೂ ಅಧಿಕ ನಗದು ಹಾಗೂ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.
ಕುಟುಂಬಸ್ಥರೆಲ್ಲರು ಸಂಬಂಧಿಗಳ ಕಾರ್ಯಕ್ರಮದ ನಿಮಿತ್ತ ಶಿಗುಪ್ಪಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡದ ನಿಖರ ಕಾರಣ ಕುರಿತು ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ರೌಡಿಶೀಟರ್ ಪವನ್ ಹತ್ಯೆ ಕೇಸ್ | ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೋಲಿಸರು



















