ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕು ವ್ಯಾಪ್ತಿಯ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಪರೀಕ್ಷೆ ದಿನವೇ ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ನಡೆದಿದೆ. ಭೂಮಿಕಾ ಕರೆಪ್ಪ ಮಾಳಿಂಗೆ (17) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ಭೂಮಿಕಾ ಪರೀಕ್ಷೆ ಹಿನ್ನೆಲೆಯಲ್ಲಿ ನಸುಕಿನ ಜಾವ 3ರಿಂದ 6 ಗಂಟೆಯವರೆಗೆ ಅಭ್ಯಾಸದಲ್ಲಿ ತೊಡಗಿದ್ದಳು ಎಂದು ತಿಳಿದುಬಂದಿದೆ. ಅನಂತರ ಅರ್ಧಗಂಟೆ ವಿಶ್ರಾಂತಿ ಪಡೆದ ಭೂಮಿಕಾ, ಸ್ನಾನಕ್ಕೆಂದು ತೆರಳಿದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆ.
ತಕ್ಷಣ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?



















