ಬೆಂಗಳೂರು | ದೇಶದ ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ (NMDC Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ
ಹುದ್ದೆ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆಗಳು: 06
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 10
ಕರ್ನಾಟಕದ ಬೆಂಗಳೂರು, ತೆಲಂಗಾಣದ ಹೈದರಾಬಾದ್, ಪಶ್ಚಿಮ ಬಂಗಾಳದ ಕೋಲ್ಕತ್ತ ಸೇರಿ ಹಲವೆಡೆ ನೇಮಕಾತಿ ನಡೆಯುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಮೈನಿಂಗ್ ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಮುಗಿಸಿದವರಿಗೆ ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದವರಿಗೆ 500 ರೂ. ಅರ್ಜಿ ಶುಲ್ಕವಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು nmdc.co.in ಗೆ ಭೇಟಿ ನೀಡಬಹುದಾಗಿದೆ.
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ನಿಯಮಿತ (NMDC Limited)ವು ಕೇಂದ್ರ ಉಕ್ಕು ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಒಂದು ಪ್ರಮುಖ ಸಾರ್ವಜನಿಕ ವಲಯದ ಉದ್ದಿಮೆಯಾಗಿದೆ. ಇದು ಭಾರತದ ಅತಿದೊಡ್ಡ ಕಬ್ಬಿಣದ ಅದಿರು ಉತ್ಪಾದಕ ಮತ್ತು ರಫ್ತುದಾರ ಸಂಸ್ಥೆಯಾಗಿದೆ. ಕಬ್ಬಿಣದ ಅದಿರು ಮಾತ್ರವಲ್ಲದೆ ವಜ್ರ, ತಾಮ್ರ, ಸುಣ್ಣದ ಕಲ್ಲು ಮತ್ತು ಇತರ ಖನಿಜಗಳ ಪರಿಶೋಧನೆಯಲ್ಲೂ ಇದು ತೊಡಗಿಸಿಕೊಂಡಿದೆ. ಇದಕ್ಕೆ ಕೇಂದ್ರ ಸರ್ಕಾರವು ನವರತ್ನ ಕಂಪನಿ ಎಂಬ ಗೌರವ ನೀಡಿದೆ.
ಇದನ್ನೂ ಓದಿ : ಕಾಂಗ್ರೆಸ್‌ಗೆ ಮಿಲೇನಿಯಲ್ಸ್ ಆಯ್ತು, ಈಗ ಜೆನ್-ಝೀ ಕೂಡ ಪಾಠ ಕಲಿಸುತ್ತಿದೆ | ‘ವೋಟ್ ಚೋರಿ’ ಆರೋಪಕ್ಕೆ ಮೋದಿ ತಿರುಗೇಟು!



















