ತುಮಕೂರು : ತುಮಕೂರು ಜಿಲ್ಲೆಯ ಪ್ರಭಾವಿ ಮಠದ ಸ್ವಾಮೀಜಿಯ ಮೇಲೆ ಕೊಲೆ ಯತ್ನ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯ ಗೋಡೆಕೆರೆ ಗ್ರಾಮದಲ್ಲಿರುವ 850 ವರ್ಷಗಳ ಇತಿಹಾಸ ಹೊಂದಿರುವ ಗೋಡೆಕೆರೆ ಶ್ರೀ ಸಿದ್ದರಾಮೇಶ್ವರ ಮಹಾಸಂಸ್ಥಾನ ಪೀಠಾಧ್ಯಕ್ಷರಾದ ಶ್ರೀ ಮೃತ್ಯುಂಜಯ ಸ್ವಾಮೀಜಿ ಅವರ ಮೇಲೆ ಕೊಲೆ ಯತ್ನ ನಡೆದಿರುವುದು ಬಹಿರಂಗವಾಗಿದೆ.
ಕಳೆದ 11-02-2026ರಂದು ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಸ್ವಾಮೀಜಿಗಳು ಜೀವನ್ಮರಣ ಹೋರಾಟ ನಡೆಸಿ ಚಿಕಿತ್ಸೆ ಪಡೆದ ಬಳಿಕ ಸದ್ಯ ಮಠಕ್ಕೆ ಮರಳಿದ್ದಾರೆ.
ಆಸ್ಪತ್ರೆಯಲ್ಲಿದ್ದಾಗಲೇ ಘಟನೆಯ ಇಂಚಿಂಚೂ ಮಾಹಿತಿಯನ್ನು ಅವರು ನೀಡಿದ್ದಾರೆ. ಗೋಡೆಕೆರೆ ಗ್ರಾಮದ ಸಿದ್ರಾಮಯ್ಯ ಎಂಬುವನು ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಸಿದ್ದರಾಮೇಶ್ವರ ದೇವಾಲಯದ ಗೋಪುರ ನಿರ್ಮಾಣಕ್ಕೆ ಸ್ವಾಮೀಜಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಕಾರಣಕ್ಕೆ, ಊರ ಜನರ ಎದುರೇ ಹತ್ಯೆ ಮಾಡಲು ಸಂಚು ರೂಪಿಸಿದ್ದನೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು



















