ಗದಗ : ಕೆರೆಯಲ್ಲಿ ಈಜಲು ತೆರಳಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಗದಗದ ಚಿಂಚಲಿ ಗ್ರಾಮದದಲ್ಲಿ ನಡೆದಿದೆ.
ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತ ವಿದ್ಯಾರ್ಥಿಗಳು. ಇಂದು ಶಾಲೆ ಮುಗಿಸಿಕೊಂಡು 3 ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ವಿದ್ಯಾರ್ಥಿ ಬಚಾವ್ ಆಗಿದ್ದಾನೆ. ಅಗ್ನಿಶಾಮಕ ದಳ ತಡವಾಗಿ ಬಂದಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ನು 20 ಅಡಿ ಆಳದ ಕೆರೆಯಲ್ಲಿ ಸ್ಥಳೀಯರು ಮತ್ತು ಮುಳುಗು ತಜ್ಞರಿಂದ ಶೋಧ ನಡೆದಿದೆ. ಈ ಘಟನಾ ಸಂಬಂಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್



















