ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕೊಪ್ಪ ತಾಲೂಕಿನ ಕಾರಂಗಿ ಗ್ರಾಮದಲ್ಲಿ ಕಾಡು ಕೋಣಗಳ ಹಿಂಡು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕಾರಂಗಿ ಗ್ರಾಮದ ಮನೆಯ ಸಮೀಪದ ಕಾಫಿ ತೋಟದಿಂದ ಐದು ಕಾಡು ಕೋಣಗಳು ಹೊರಬಂದು ರಸ್ತೆ ದಾಟಿದ ಘಟನೆ ನಡೆದಿದೆ. ಈ ವೇಳೆ ಕಾಡು ಕೋಣಗಳ ಹಿಂಡು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಹರಿಹರಪುರ ಹಾಗೂ ಕಾರಂಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ಇತ್ತೀಚೆಗೆ ಕಾಡು ಕೋಣಗಳ ನಿರಂತರ ಸಂಚಾರ ಕಂಡು ಬರುತ್ತಿದ್ದು, ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಕಾಡು ಕೋಣಗಳು ರಸ್ತೆ ದಾಟುತ್ತಿರುವ ದೃಶ್ಯವನ್ನು ಕೆಲವರು ಮೊಬೈಲ್ ಫೋನ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಈ ಘಟನೆ ಕೊಪ್ಪ ವಲಯ ಅರಣ್ಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ



















