ಬೆಂಗಳೂರು: ನಗರದ ಅಂಜನಾಪುರದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಹಾಸಿಗೆ ತಯಾರಿಕಾ ಗೋಡಾನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಭಾರೀ ಪ್ರಮಾಣಕ್ಕೆ ವಿಸ್ತರಿಸಿದೆ.
ಗೋಡಾನ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಸಿಗೆ ಹಾಗೂ ದಿಂಬುಗಳು ಸಂಗ್ರಹವಾಗಿದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸಿ ದಟ್ಟ ಹೊಗೆ ಆವರಿಸಿದೆ. ಪರಿಣಾಮವಾಗಿ ಅಂಜನಾಪುರ ಸುತ್ತಮುತ್ತಲ ಪ್ರದೇಶದಲ್ಲಿ ಕಪ್ಪು ಹೊಗೆ ಆವರಿಸಿಕೊಂಡಿದ್ದು, ಸಾರ್ವಜನಿಕರಿಗೆ ಉಸಿರಾಟದ ತೊಂದರೆ ಉಂಟಾಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ | ನವ ವಿವಾಹಿತ ಜೋಡಿ ಸ್ಥಳದಲ್ಲೇ ಸಾವು


















