ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಗೃಹ ಸಚಿವಾಲಯದಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗಾಗಿ (Ministry of Home Affairs Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 58 ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಗೃಹ ಸಚಿವಾಲಯ
ಒಟ್ಟು ಹುದ್ದೆಗಳು: 58
ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 2
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನವದೆಹಲಿಯಲ್ಲಿರುವ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Under Secretary, Admin. III Section, Janganana Bhawan, Tower-A, 3rd Floor, 2/A, Mansingh Road New Delhi-110011
ಇದನ್ನೂ ಓದಿ : ಕೇಂದ್ರ ಸರ್ಕಾರದ BHEL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗ



















