ಕೋಲಾರ/ಗದಗ : ಅವಳಿ ಮಕ್ಕಳ ಜೊತೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಳ್ಳಲು ತಾಯಿ ಮಕ್ಕಳೊಂದಿಗೆ ಬಾವಿಗೆ ಹಾರಿದ್ದು, ಈ ವೇಳೆ 3 ವರ್ಷದ ಹರ್ಷಿತ್ ಮತ್ತು ಹಿತೇಶ್ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಉಷಾರನ್ನು ರಕ್ಷಿಸಲಾಗಿದೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ರಾವಲ್ಪಿಂಡಿಯ ನೂರ್ ಖಾನ್ ಏರ್ ಬೇಸ್ ಮೇಲೆ ತಾಲಿಬಾನ್ ಭೀಕರ ಡ್ರೋನ್ ದಾಳಿ!



















